ಕನ್ನಡವನ್ನು ಗಣಕಗಳಲ್ಲಿ ಬಳಸುವುದರಲ್ಲಿ ಆಸಕ್ತಿ ಹೊಂದಿರುವ ಆಸಕ್ತರ ಗುಂಪಿನಿಂದ 1997 ರಲ್ಲಿ ಕನ್ನಡ ಗಣಕ ಪರಿಷತ್ತು ಒಂದು ಸ್ವಯಂಸೇವಾ ಸಂಸ್ಥೆಯಾಗಿ ರೂಪುಗೊಂಡಿತು. ಸಂಸ್ಥೆಯು ವಿವಿಧ ಸಂಗತಿಗಳ ಗಣಕೀಕರಣದ ಸಂದರ್ಭದಲ್ಲಿ ಕನ್ನಡವನ್ನು ಬಳಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಸಿದ್ಧಪಡಿಸಿದೆ; ಅವುಗಳನ್ನು ಕಾರ್ಯರೂಪಕ್ಕೆ ತರಲು ಯತ್ನಿಸುತ್ತಿದೆ. ತುಂಬ ಮುಖ್ಯವಾಗಿ ಕರ್ನಾಟಕ ಸರ್ಕಾರದ ಆಡಳಿತದ ಗಣಕೀಕರಣದ ಸಂದರ್ಭದಲ್ಲೂ ಕನ್ನಡ ಭಾಷೆಯೇ ಮಾಧ್ಯಮವಾಗಿ ಮುಂದುವರೆಯಬೇಕೆಂದು ಪ್ರತಿಪಾದಿಸಿದೆ. ಈ ದಿಸೆಯಲ್ಲಿ ಒಂದು ಕನ್ನಡ ತಂತ್ರಾಂಶವು (ಸಾಫ಼್ಟ್ ವೇರ್) ನೀಡಬೇಕಾದ ಕನಿಷ್ಠ ಸೌಲಭ್ಯಗಳನ್ನು ಗುರುತಿಸಿ ಅದನ್ನು ಪ್ರಚುರಪಡಿಸಿ ಆ ಬಗ್ಗೆ ಸರ್ಕಾರದ ಗಮನವನ್ನು ಸೆಳೆದಿದೆ. ಕನ್ನಡ ಗಣಕ ಪರಿಷತ್ತು ಗಣಕ ಮತ್ತು ಕನ್ನಡಗಳಿಗೆ ಸಂಬಂಧಿಸಿದಂತೆ ಕೆಲವು ಧ್ಯೇಯೋದ್ದೇಶಗಳನ್ನಿರಿಸಿಕೊಂಡಿದೆ. ಅವುಗಳನ್ನು ಈಡೇರಿಸಿಕೊಳ್ಳುವ ದಿಸೆಯಲ್ ಕಾರ್ಯನಿರತವಾಗಿದೆ.
ಹೆಚ್ಚಿನ ಮಾಹಿತಿ